ನವದೆಹಲಿ, ಜ. 13 (DaijiworldNews/MB) : ಈ ಹಿಂದೆ ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದೆ.
ಈ ಬಗ್ಗೆ ಸಚಿವಾಲಯ ಮಾಹಿತಿ ನೀಡಿದ್ದು, ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿ ಮುಂದೂಡಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದೆ.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಕೆಲ ದಿನಗಳ ಹಿಂದೆ, ದೇಶದಲ್ಲಿ ಜನವರಿ 17 ರಿಂದ 3 ದಿನಗಳವರೆಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಎಲ್ಲಾ ಮಕ್ಕಳಿಗೂ ಲಸಿಕೆ ಹಾಕಿಸುವಂತೆ ತಿಳಿಸಿದ್ದರು.