ಬೆಂಗಳೂರು, ಜ.13 (DaijiworldNews/PY): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ನೂತನ 7 ಶಾಸಕರು ಇಂದು ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನೂತನ ಸಚಿವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣವಚನ ಬೋಧಿಸಿದರು.
ಹಿರಿಯ ಶಾಸಕ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ್ ನಿರಾಣಿ, ಸುಳ್ಯ ಶಾಸಕ ಎಸ್. ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಪ್ರಮಾಣವಚನ ಸ್ವೀಕರಿಸಿದರು.
ನೂತನ ಏಳು ಸಚಿವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲರು ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಆರ್.ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.