ಬೆಳಗಾವಿ, ಜ.13 (DaijiworldNews/PY): ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅಸಮಾಧಾನ ಹೊರಹಾಕಿದ್ದು, "ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ" ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಸ್ಥಾನ ಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೆ ಪಕ್ಷಕ್ಕೆ ನಿಷ್ಟೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಅನ್ನುವ ತಾತ್ಕಾಲಿಕ ಇಂದಿನ ಈ ನಡೆ ವಿಷಾದಕರ ಸಂಗತಿ" ಎಂದಿದ್ದಾರೆ.
"ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಟೆ ಇದು ದೌರ್ಬಲ್ಯ ಅಲ್ಲ" ಎಂದು ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.