ಬೆಂಗಳೂರು, ಜ 13 (DaijiworldNews/SM): ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು 7 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ ಅಬಕಾರಿ ಸಚಿವರಾಗಿದ್ದ ಎಚ್ ನಾಗೇಶ್ ಅವರಿಂದ ರಾಜಿನಾಮೆ ಪಡೆಯಲಾಗಿದೆ.
ಸಚಿವ ಸ್ಥಾನವನ್ನು ಹಿಂದಕ್ಕೆ ಪಡೆಯುವ ಸಂದರ್ಭದಲ್ಲಿ ನಾಗೇಶ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆ ಮೂಲಕ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್ ನಾಗೇಶ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.