ಮಂಗಳೂರು, ಜ 13 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 20 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 33,309ಕ್ಕೆ ಏರಿಕೆಯಾಗಿದೆ. ಈ ಪೈಕಿ 412 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಒಟ್ಟು 5,35,223 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,01,914 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು 35 ಜನರನ್ನು ಬುಧವಾರ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 32,165ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ ಐದು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಸಂಖ್ಯೆ 23,203ಕ್ಕೆ ಏರಿಕೆಯಾಗಿದೆ. ಈ ಪೈಕಿ 53 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 3,16,983 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,93,780 ಮಾದರಿಗಳು ನಕಾರಾತ್ಮಕವಾಗಿವೆ.
ಬುಧವಾರ 10 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 22,961 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.