ಧಾರವಾಡ,ಜ.14 (DaijiworldNews/HR): ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜನವರಿ 20ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.
ಬುಧವಾರ ವಿಚಾರಣೆ ನಡೆಸಿದ ಹೈ ಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಅಗತ್ಯವಿದ್ದು, ಇನ್ನೂ ಒಂದು ವಾರ ಕಾಲ ವಿಚಾರಣೆ ಮುಂದೂಡುವುದಾಗಿ ತಿಳಿಸಿದೆ.
ಇನ್ನು ಈ ಹಿಂದೆ ವಿನಯ ಕುಲಕರ್ಣಿ ಅವರು ಜಾಮೀನಿಗಾಗಿ ಧಾರವಾಡ ಜಿಲ್ಲೆಯ 3ನೇ ಅಧಿಕ ಹಾಗೂ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ತಿರಸ್ಕೃತಗೊಂಡಿದ್ದರಿಂದ ಅವರು ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದರು ಎನ್ನಲಾಗಿದೆ.