ನವದೆಹಲಿ, ಜ. 14 (DaijiworldNews/MB) : ಜನವರಿ 31ರಂದು ದೇಶದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ನಡೆಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.
ಈ ಹಿಂದೆ ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿತ್ತು.
ಗುರುವಾರ ಮತ್ತೆ ದಿನಾಂಕ ನಗದಿ ಮಾಡಿರುವ ಇಲಾಖೆಯು, ''ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನವರಿ 30ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ'' ಎಂದು ತಿಳಿಸಿದೆ.