ನವದೆಹಲಿ,ಜ.14 (DaijiworldNews/HR): ಜನವರಿ16ರಿಂದ ದೇಶದಾದ್ಯಂತ ಆರಂಭವಾಗಲಿರುವ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಮ್ದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ನೀತಿ ಆಯೋಗವು ಸ್ಪಷ್ಟಪಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, "ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ಮೊದಲ ದಿನ ಸುಮಾರು 3 ಲಕ್ಷ ಜನರು ಲಸಿಕೆಗಳನ್ನು ಸ್ವೀಕರಿಸಲಿದ್ದಾರೆ" ಎಂದರು.
ಇನ್ನು" ಭಾರತದಾದ್ಯಂತ ಒಟ್ಟು 3,000 ಕೇಂದ್ರಗಳಲ್ಲಿ ಕೊರೊನಾ ಲಸಿಕೆ ಅಭಿಯಾನವು ನಡೆಯಲಿದ್ದು, ಪ್ರತಿ ಕೇಂದ್ರದಲ್ಲಿ ದಿನವೊಂದಕ್ಕೆ 100 ಜನರಿಗೆ ಲಸಿಕೆ ನೀಡಲಿದ್ದು, ಮುಂದಿನ ದಿನಗಳಲ್ಲಿ 5000 ಸಾವಿರ ಕೇಂದ್ರಗಳಲ್ಲಿ ಲಸಿಕೆ ಅಭಿಯಾನವನ್ನು ಆರಂಭಿಸುವ ಚಿಂತನೆ ಇದೆ" ಎಂದು ಪೌಲ್ ತಿಳಿಸಿದ್ದಾರೆ.