ಮುಂಬೈ, ಜ.14 (DaijiworldNews/PY): ಚಲಿಸುತ್ತಿದ್ದ ರೈಲಿನ ಬಾಗಿಲಿನಲ್ಲಿ ನಿಂತಿದ್ದ ಮಹಿಳೆಯನ್ನು ಆಕೆಯ ಪತಿಯೇ ರೈಲಿನಿಂದ ಕೆಳಕ್ಕೆ ತಳ್ಳಿ ಹತ್ಯೆ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಚೆಂಬೂರ್ ಹಾಗೂ ಗೋವಂಡಿ ರೈಲ್ವೆ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
31 ವರ್ಷದ ಆರೋಪಿ ಹಾಗೂ ಸಾವನ್ನಪ್ಪಿರುವ ಮಹಿಳೆ ಕೂಲಿ ಕಾರ್ಮಿಕರಾಗಿದ್ದು, ಕಳೆದ ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದರು. ಮೃತ ಮಹಿಳೆಗೆ ಇದು ಎರಡನೇ ವಿವಾಹವಾಗಿದ್ದು, ಈಕೆಗೆ ಏಳು ವರ್ಷದ ಪುತ್ರಿ ಇದ್ದಾಳೆ.
ಮೂವರೂ ಕೂಡಾ ಸ್ಥಳೀಯ ರೈಲಿನಲ್ಲಿ ಸೋಮವಾರ ಪ್ರಯಾಣಿಸುತ್ತಿದ್ದರು. ಇಬ್ಬರು ಕೂಡಾ ರೈಲಿನ ಬೋಗಿಯ ಬಳಿ ನಿಂತಿದ್ದರು. ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಹೊರಬಿದ್ದ ಸಂದರ್ಭ ಪತಿ ಆಕೆಯನ್ನು ಹಿಡಿದುಕೊಂಡಿದ್ದ. ನಂತರ ತನ್ನ ಹಿಡಿತವನ್ನು ಸಡಿಲಗೊಳಿಸಿದ ಕಾರಣ ಆಕೆ ರೈಲಿನ ಹಳಿಯ ಮೇಲೆ ಬಿದ್ದಿರುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಘಟನೆಯ ಬಗ್ಗೆ ರೈಲ್ವೆ ಪ್ರಯಾಣಿಕರು ಕೂಡಾ ವಿವರಣೆ ನೀಡಿದ್ದಾರೆ. ಕೂಡಲೇ ಪೊಲೀಸರು ಮಹಿಳೆಯ ಪತಿಯನ್ನು ಬಂಧಿಸಿದದ್ದು, ಘಟನಾ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಮಹಿಳೆ ಗಂಭೀರ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಬಳಿಕ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಆಕೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ.
ಬಾಲಕಿಯಲ್ಲಿ ಮಹಿಳೆಯ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.