ಬೆಂಗಳೂರು, ಜ.14 (DaijiworldNews/HR): "ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಹೇಳಿದ್ದಾರೆ, ಆದರೆ ಪಾಪ ಅವರಿಗೆ ಅವರ ಪಕ್ಷದಲ್ಲಿರುವವರ ಇತಿಹಾಸ ಗೊತ್ತಿಲ್ಲ. ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲು ಸಾಧ್ಯವಿಲ್ಲ" ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬಿಜೆಪಿ ಶಾಸಕರು ಹೇಳಿರುವ ಸಿಡಿ ವಿಚಾರವು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು. ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, ಅದು 'ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ' ಎಂದು ಬಿಜೆಪಿ ನಾಯಕರೇ ಹೇಳಿದ್ದಾರೆ" ಎಂದು ರೋಪಿಸಿದ್ದಾರೆ.
ಇನ್ನು "ಕೊರೊನಾ ಸಂಕಷ್ಟದ ಸಮಯದಲ್ಲಿ ನಗರ ಸ್ಥಳೀಯ ಸಂಸ್ಥೆಯಲ್ಲಿ ತೆರಿಗೆ ಹಾಕುವ ಕಾನೂನು ತಂದಿರುವುದು ಜನರ ಸುಲಿಗೆ ಮಾಡುವ ಕ್ರಮವಾಗಿದ್ದು, ತಿಂಗಳಲ್ಲಿ ಮೂರು ಬಾರಿ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಆಗಿದೆ ಇವುಗಳನ್ನು ವಿರೋಧಿಸಿ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ" ಎಂದು ಹೇಳಿದ್ದಾರೆ.