ಮಂಗಳೂರು, ಜ 14 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಗುರುವಾರ 28 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 33,337ಕ್ಕೆ ಏರಿಕೆಯಾಗಿದೆ. ಈ ಪೈಕಿ 423 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿತ ತನಕ ಒಟ್ಟು 5,38,736 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,05,399 ಮಂದಿಯ ವರದಿ ನೆಗೆಟಿವ್ ಆಗಿದೆ. ಗುರುವಾರದಂದು ಒಟ್ಟು 17 ಜನರನ್ನು ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 32,182 ಕ್ಕೆ ತಲುಪಿದೆ. ಈವರೆಗೆ ಒಟ್ಟು 732 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಗುರುವಾರ ಮೂರು ಹೊಸ ಕೊರೋನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,205ಕ್ಕೆ ಏರಿಕೆಯಾಗಿದೆ. ಈ ಪೈಕಿ 52 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,18,160 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,94,955 ನಕಾರಾತ್ಮಕವಾಗಿವೆ.
ಗುರುವಾರ ಮೂವರು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 22,964 ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 189 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.