ಲಕ್ನೋ, ಜ.15 (DaijiworldNews/PY): "ಮುಂಬರುವ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತೇವೆ" ಎಂದು ಬಿಎಸ್ಪಿ ಪಕ್ಷದ ಅಧ್ಯಕ್ಷೆ ಮಾಯಾವತಿ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೊರೊನಾ ಲಸಿಕೆ ವಿತರಣೆ ಮಾಡುವ ಕೇಂದ್ರದ ಕಾರ್ಯಕ್ರಮವನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಆದರೆ, ದೇಶದ ಜನತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉಚಿತವಾಗಿ ಕೊರೊನಾ ಲಸಿಕೆ ನೀಡಬೇಕು" ಎಂದು ಆಗ್ರಹಿಸಿದರು.
"ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸಲಿದ್ದೇವೆ. ಯಾವುದೇ ಪಕ್ಷದೊಂದಿಗೂ ಕೂಡಾ ವಿಲೀನವಾಗುವುದಿಲ್ಲ" ಎಂದರು.
ಕೃಷಿ ಕಾಯ್ದೆಯ ವಿರುದ್ದ ರೈತರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಪ್ರತಿಭಟನಾ ನಿರತ ರೈತರ ಎಲ್ಲಾ ಆಗ್ರಹಗಳಿಗೆ ಕೇಂದ್ರ ಒಪ್ಪಿಗೆ ನೀಡಬೇಕು' ಎಂದು ಹೇಳಿದರು.