ಮಂಗಳೂರು, ಜ.15 (DaijiworldNews/PY): ರಾಜ್ಯದ ನೂತನ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವ ಎಸ್. ಅಂಗಾರ ಅವರು ಜ.15ರ ಶುಕ್ರವಾರದಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಸಚಿವ ಎಸ್. ಅಂಗಾರ ಅವರನ್ನು ಮೇಯರ್ ದಿವಾಕರ್ ಪಾಂಡೇಶ್ವರ ಹಾಗೂ ಇತರ ಬಿಜೆಪಿ ಮುಖಂಡರು ಸ್ವಾಗತಿಸಿದರು.
ಸಚಿವರೊಂದಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ವೈ ಶೆಟ್ಟಿ, ಸಂಜೀವ ಮಠಂದೂರು, ಉಮಾನಾಥ್ ಕೋಟ್ಯಾನ್ ಹಾಗೂ ರಾಜೇಶ್ ನಾಯಕ್ ಇದ್ದರು.
ಸಚಿವರು ಸಂಘನಿಕೇತನ ಹಾಗೂ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.