ಮಂಗಳೂರು, ಜ. 15 (DaijiworldNews/MB) : ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 37 ಹಾಗೂ ಉಡುಪಿ ಜಿಲ್ಲೆಯಲ್ಲಿ 8 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಶುಕ್ರವಾರ 37 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 33374 ಕ್ಕೆ ಏರಿದೆ. ಈ ಪೈಕಿ 417 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಜಿಲ್ಲೆಯಲ್ಲಿ ಈವರೆಗೆ 540684 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 507310 ವರದಿ ನೆಗೆಟಿವ್ ಆಗಿದೆ. ಶುಕ್ರವಾರ 43 ಮಂದಿ ಸೋಂಕಿತರು ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ 32525 ಸೋಂಕಿತರು ಗುಣಮುಖರಾಗಿದ್ದಾರೆ. ಶುಕ್ರವಾರ ಯಾವುದೇ ಸಾವು ಪ್ರಕರಣಗಳು ವರದಿಯಾಗಿಲ್ಲ. ಒಟ್ಟು 732 ಸೋಂಕಿತರು ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಕೊರೊನಾ ವರದಿ:
ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 8 ಮಂದಿಗೆ ಪಾಸಿಟಿವ್ ಆಗಿದ್ದು ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23213 ಕ್ಕೆ ಏರಿಕೆಯಾಗಿದೆ. ಈ ಪೈಕಿ 41 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಈವರೆಗೆ 319755 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 296542 ನೆಗೆಟಿವ್ ಆಗಿದೆ. ಶುಕ್ರವಾರ 19 ಮಂದಿ ಸೋಂಕಿತರು ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 22983 ಕ್ಕೆ ಏರಿದೆ. ಶುಕ್ರವಾರ ಯಾವುದೇ ಸಾವು ಪ್ರಕರಣಗಳು ವರದಿಯಾಗಿಲ್ಲ. ಒಟ್ಟು 189 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.