ರಾಮನಗರ, ಜ.16 (DaijiworldNews/PY): "ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಅಥವಾ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
2023ರ ಚುನಾವಣೆಯ ಸಿದ್ದತೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಚಾಮುಂಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, "ಕೆಲವರು ರಾಜ್ಯದಲ್ಲಿ ಜೆಡಿಎಸ್ ಮುಗಿದೇ ಹೋಯಿತು ಎಂದುಕೊಂಡಿದ್ದಾರೆ. ನಾವು ಜನರ ಅಭಿವೃದ್ದಿಗೆ ಪ್ರಾಮುಖ್ಯತೆ ನೀಡುತ್ತೇವೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ" ಎಂದಿದ್ದಾರೆ.
"ಮುಂಬರುವ ದಿನಗಳಲ್ಲಿ ಜೆಡಿಎಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದ್ದು, ಈ ವೇಳೆ ವರ್ಷಕ್ಕೆ ಒಂದರಂತೆ ಪಂಚರತ್ನ ಎನ್ನುವ ಹೆಸರಿನಲ್ಲಿ ಮುಖ್ಯವಾದ ಐದು ಕಾರ್ಯಕ್ರಮಗಳಿಗೆ ಪ್ರಾಶಸ್ತ್ಯ ನೀಡಲಾಗುತ್ತದೆ" ಎಂದು ತಿಳಿಸಿದ್ದಾರೆ.