ಕೋಲ್ಕತ್ತ,ಜ.16 (DaijiworldNews/HR): ಟಿಎಂಸಿ ಪಕ್ಷ ತ್ಯಜಿಸುವ ಸುಳಿವು ನೀಡಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಬಿರ್ಭೂಮ್ ಕ್ಷೇತ್ರದ ಸಂಸದೆ ಶತಾಬ್ದಿ ರಾಯ್ ಶುಕ್ರವಾರ ಸಂಜೆ ವೇಳೆಗೆ "ಯಾವುದೇ ಕಾರಣಕ್ಕೂ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.
ಸಂಸದೆ ಶತಾಬ್ದಿ ರಾಯ್ ಅವರು ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಶೀಘ್ರದಲ್ಲೇ ತನ್ನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಫೇಸ್ಬುಕ್ ಮೂಲಕ ತಿಳಿಸಿದ್ದು, ಬಳಿಕ ಅವರೊಂದಿಗೆ ಪಕ್ಷದ ಹಿರಿಯ ಮುಖಂಡ ಅಭಿಷೇಕ್ ಬ್ಯಾನರ್ಜಿ ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದರು ಎನ್ನಲಾಗಿದೆ.
ಇನ್ನು ಸಭೆ ಬಳಿಕ ಮಾತನಾಡಿದ ಶತಾಬ್ದಿ ರಾಯ್, "ಎಲ್ಲ ಸಮಸ್ಯೆಗಳು ಬಗೆಹರಿದಿದ್ದು, ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಮಮತಾ ಬ್ಯಾನರ್ಜಿಯವರೇ ನಮ್ಮ ನಾಯಕಿ" ಎಂದು ತಿಳಿಸಿದ್ದಾರೆ.