ಚಿತ್ರದುರ್ಗ,ಜ.16 (DaijiworldNews/HR): "ಸಿದ್ದರಾಮಯ್ಯನವರಿಗೆ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದ್ದು, ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ" ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಈ ಕುರಿತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅನೈತಿಕ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಈ ರೀತಿ ಹೇಳುವ ಮೂಲಕ ಸಿದ್ದರಾಮಯ್ಯ ಮೇಷ್ಟ್ರಾಗಲು ಹೊರಟಿದ್ದಾರೆ, ಆದರೆ ನಮ್ಮನ್ನು ಟೀಕಿಸಲು ಅವರಿಗೆ ನೈತಿಕತೆ ಇರಬೇಕು" ಎಂದರು.
ಇನ್ನು "ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಹೇಳಿ ದೇವೇಗೌಡರನ್ನು ಸೋಲಿಸಿದಂತವರು ಸಿದ್ದರಾಮಯ್ಯ. ಕುಮಾರಸ್ವಾಮಿ ಅವರನ್ನು ಸಿಎಂ ಕುರ್ಚಿಯಿಂದ ಇಳಿಸಿದವರು ನೈತಿಕತೆ ಬಗ್ಗೆ ಮಾತನಾಡುತ್ತಿದ್ದಾರೆ" ಎಂದು ಹೇಳಿದ್ದಾರೆ.