ಬೆಂಗಳೂರು,ಜ.16 (DaijiworldNews/HR): "ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆಗೆ ಪ್ರಯೋಗ ಮಾಡುವ ಬದಲಾಗಿ ಮಂತ್ರಿಗಳು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಮೊದಲ ಲಸಿಕೆ ಪಡೆದು ಮಾದರಿಯಾಗಲಿ" ಎಂದು ಶಾಸಕ ಯುಟಿ ಖಾದರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಕೊರೊನಾ ಲಸಿಕೆ ಬಂದಿರುವುದು ಸಂತೋಷ ಆದರೆ ಬಡಪಾಯಿ ಡಿ ಗ್ರೂಪ್ ನೌಕರರ ಮೇಲೆ ಲಸಿಕೆ ಪ್ರಯೋಗ ಮಾಡುವುದಕ್ಕಿಂತ ಆಡಂಬರದಿಂದ ಉದ್ಘಾಟನೆ ಮಾಡುವ ಮಂತ್ರಿಗಳು, ಅಧಿಕಾರಿಗಳು ಲಸಿಕೆ ಪಡೆಯಲಿ" ಎಂದು ಹೇಳಿದ್ದಾರೆ.
ಇನ್ನು "ಕೊರೊನಾ ಲಸಿಕೆಯನ್ನು ಪಡೆಯುವುದಕ್ಕೆ ಯಾವುದೇ ಸರ್ಕಾರಿ ಅಧಿಕಾರಿಗಳು ಅಥವಾ ಮಂತ್ರಿಗಳು ಏಕೆ ಮುಂದಾಗಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.