ಬೆಂಗಳೂರು, ಜ 16 (DaijiworldNews/SM): ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆಗೆ ಚಾಳನೆ ನೀಡಲಾಗಿದ್ದು, ಮೊದಲ ದಿನವೇ 24,300 ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮೆಡಿಕಲ್ ಕಾಲೇಜಿನ ಪಿಎಂಎಸ್ಎಸ್ ವೈ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಇನ್ನು ಕೊರೋನಾ ಸೋಂಕಿಗೆ 10 ತಿಂಗಳಲ್ಲಿ ಲಸಿಕೆ ಕಂಡು ಹಿಡಿದಿರುವುದು ಐತಿಹಾಸಿಕ ದಾಖಲೆಯಾಗಿದೆ ಎಂದು ಸಚಿವರು ತಿಳಿಸಿದರು. ದೇಶದ ಸಂಶೋಧಕರು, ವೈಜ್ಞಾನಿಕ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕೊರೊನಾ ವೈರಸ್ ಲಸಿಕೆ ವಿತರಣೆ ಆರಂಭವಾದ ಮೊದಲ ದಿನವೇ ಐತಿಹಾಸಿಕವಾಗಿ ಲಸಿಕೆ ವಿತರಣೆ ಮಾಡಲಾಗಿದೆ. ರಾಜ್ಯದಲ್ಲಿ ಒಂದೇ ದಿನ 24,300 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.