ಮಂಗಳೂರು, ಜ 16 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ 20 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,394 ಕ್ಕೆ ಏರಿಕೆಯಾಗಿದೆ. ಈ ಪೈಕಿ 95 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 5,42,968 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,09,574 ಮಂದಿಯ ವರದಿ ನಕಾರಾತ್ಮಕವಾಗಿದೆ. ಶನಿವಾರ 41 ಜನರನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 733 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಇನ್ನು ಉಡುಪಿ ಜಿಲ್ಲೆಯಲ್ಲಿ ಶನಿವಾರ 5 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,218ಕ್ಕೆ ಏರಿಕೆಯಾಗಿದೆ. ಈ ಪೈಕಿ 27 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 3,20,891 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 2,97,673 ಮಾದರಿಗಳು ನಕಾರಾತ್ಮಕವಾಗಿವೆ.
ಶನಿವಾರ 19 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ