ಕಾಸರಗೋಡು, ಜ. 17 (DaijiworldNews/MB) : ಮಂಗಳೂರು - ತಿರುವನಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದ್ದು, ಯಾರಿಗೂ ಅಪಾಯ ಸಂಭವಿಸಿಲ್ಲ. ಇಂದು ಬೆಳಿಗ್ಗೆ 7.45 ರ ಸುಮಾರಿಗೆ ಘಟನೆ ನಡೆದಿದೆ.
ಪಾರ್ಸೆಲ್ ಬಾಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಿರುವನಂತಪುರದ ವರ್ಕಳದಲ್ಲಿ ಘಟನೆ ನಡೆದಿತ್ತು. ಹೊಗೆಯನ್ನು ಗಮನಿಸಿದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿ ಭಾರೀ ಅಪಾಯವನ್ನು ತಪ್ಪಿಸಿದ್ದಾರೆ.
ಬಳಿಕ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಬೆಂಕಿ ಹತ್ತಿಕೊಂಡ ಬೋಗಿಯನ್ನು ಬೇರ್ಪಡಿಸಲು ಸಾಧ್ಯವಾದುದರಿಂದ ಇತರ ಬೋಗಿಗಳಿಗೂ ಬೆಂಕಿ ಹರಡದಂತೆ ತಡೆಗಟ್ಟಲಾಯಿತು.
ನಾಗರಿಕರು ಹಾಗೂ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಪ್ರಯಾಣಿಕರಿಗೆ ಯಾವುದೇ ಅಪಾಯ ಉಂಟಾಗಿಲ್ಲ.