ಮುಂಬೈ,ಜ.17 (DaijiworldNews/HR): ಮುಂಬೈ ಹಾಗೂ ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ಕೊರೊನಾ ಲಸಿಕೆ ವಿತರಣೆಯನ್ನು ಎರಡು ದಿನಗಳ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ಮಾಹಿತಿ ನೀಡಿದೆ.
ಸಾಂಧರ್ಭಿಕ ಚಿತ್ರ
'ಕೋವಿನ್' ಆಪ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಜನವರಿ 17 ಹಾಗೂ 18ರಂದು ಮುಂಬೈನಲ್ಲಿ ಕೊರೊನಾ ಲಸಿಕೆ ಹಂಚಿಕೆಯನ್ನು ಸ್ಥಗಿತಗೊಳಿಸಲಾಗಿದೆ.
ಇನ್ನು ಕೊರೊನಾ ಲಸಿಕೆ ಪಡೆಯುವ ಮುಂಚೂಣಿಯ ಸೇನಾನಿಗಳ ಹೆಸರುಗಳನ್ನು ಕೋವಿನ್ ಆಪ್ನಲ್ಲಿ ನೊಂದಾಯಿಸಬೇಕಿದ್ದು, ಈ ಸಂಬಂಧ ತಾಂತ್ರಿಕ ದೋಷ ಕಂಡುಬಂದಿದ್ದು ಅದನ್ನು ಕೇಂದ್ರ ಸರ್ಕಾರ ಸರಿಪಡಿಸುತ್ತಿದೆ ಎಂದು ತಿಳಿಸಿದೆ.