ಲಖನೌ,ಜ.17 (DaijiworldNews/HR): "ಬಡವರಿಗೆ ಉಚಿತವಾಗಿ ಕೊರೊನಾ ಲಸಿಕೆ ಯಾವಾಗ ಸಿಗಲಿದೆ?" ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಎಲ್ಲಾ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸುವ ಬಿಜೆಪಿ ಪಕ್ಷದ ಕಾರ್ಯಕರ್ತರೇ ಮೊದಲು ಸರದಿ ಸಾಲಿನಲ್ಲಿ ನಿಂತು ಲಸಿಕೆಯನ್ನು ಪಡೆಯಬೇಕು" ಎಂದರು.
ಇನ್ನು "ಒಂದು ವರ್ಷದ ಬಳಿಕ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದಾಗ, ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡಲಿದ್ದೇವೆ" ಎಂದು ಭರವಸೆ ನೀಡಿದ್ದಾರೆ.
"ಕೊರೊನಾ ವೈರಸ್ ಲಸಿಕೆ ಹೊರಬಂದಿರುವುದು ಸಂತೋಷವಾಗಿದೆ, ಆದರೆ ವೈದ್ಯರು ಹೇಳುವುದನ್ನು ಮಾತ್ರ ನಂಬುತ್ತೇನೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನಲ್ಲ" ಎಂದು ಹೇಳಿದ್ದಾರೆ.