ಶ್ರೀನಗರ, ಜ.17 (DaijiworldNews/HR): ಶ್ರೀನಗರದಲ್ಲಿ ಇಂದು ಕನಿಷ್ಠ ತಾಪಮಾನವು ಮೈನಸ್ 7.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿ ತಿಂಗಳ ಮೊದಲ ವಾರದಿಂದಲೇ ಶೀತ ಅಲೆ ಬೀಸುತ್ತಿದ್ದು, ಭಾರೀ ಹಿಮಪಾತದಿಂದಾಗಿ ವಿಮಾನಯಾನ ಮತ್ತು ಸಾರಿಗೆ ಸಂಪರ್ಕಕ್ಕೆ ಅಡಚಣೆ ಉಂಟಾಗಿತ್ತು.
ಇನ್ನು 1893ರಲ್ಲಿ ಕನಿಷ್ಠ ತಾಪಮಾನವು ಮೈನಸ್ 14.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಈವರೆಗಿನ ಅತಿ ಕನಿಷ್ಠ ತಾಪಮಾನವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.