ಮೈಸೂರು,ಜ.17 (DaijiworldNews/HR): "ಏಪ್ರಿಲ್ ನಂತರ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ, ನನಗೆ ಆರ್ಎಸ್ಎಸ್ ಮೂಲಗಳಿಂದ ಮಾಹಿತಿ ಸಿಕ್ಕಿದೆ" ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಯಡಿಯೂರಪ್ಪ ಮುಂದುವರಿಯುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ, ಯಾವುದೇ ಪಾರ್ಟಿಯ ಹೈಕಮಾಂಡ್ ಆದರೂ ತೆಗೆಯುತ್ತೇನೆಂದು ಹೇಳುವುದಿಲ್ಲ. ಹೈಕಮಾಂಡ್ ತೆಗೆಯುತ್ತೇನೆಂದರೆ ಸರ್ಕಾರ ನಡೆಯುತ್ತದೆಯೇ? ಕೆಲಸ ಮಾಡಲು ಆಗುತ್ತದೆಯೇ" ಎಂದರು.
ಇನ್ನು "ನನಗೆ ಆರ್ಎಸ್ಎಸ್ ಮೂಲಗಳಿಂದ ಮಾಹಿತಿ ಸಿಕ್ಕಿದ್ದು, ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ನಂತರ ಕೆಳಗಿಳಿಸುತ್ತಾರೆ" ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ವಿರುದ್ಧ ಸಿ.ಡಿ. ಬ್ಲಾಕ್ ಮೇಲ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, "ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾನೋ ಯಾರಿಗೆ ಗೊತ್ತು? ಈ ಬಗ್ಗೆ ಆದಷ್ಟು ಬೇಗ ತನಿಖೆಯಾಗಬೇಕು" ಎಂದು ಹೇಳಿದ್ದಾರೆ.