ಕಲಬುರ್ಗಿ, ಜ.17 (DaijiworldNews/PY): "ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿದ್ದು, ರೈತರನ್ನು ಗುಲಾಮರನ್ನಾಗಿಸುವ ಷಡ್ಯಂತ್ರ ರೂಪಿಸಿವೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಅವರು, "ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನವಾಗಿದೆ. ಕೇಂದ್ರದ ಈ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಸರ್ಕಾರ ತನ್ನ ಮೊಂಡುತನ ಬಿಟ್ಟುಈ ಕಾಯ್ದೆಗಳನ್ನು ಶೀಘ್ರವೇ ಹಿಂಪಡೆಯಬೇಕು" ಎಂದಿದ್ದಾರೆ.
"ಜ.20ರಂದು ಬೆಂಗಳೂರಿನ ಫ್ರೀಡಂಪಾರ್ಕ್ನಿಂದ ರಾಜಭವನದವರೆಗೆ ರ್ಯಾಲಿಯ ಮೂಲಕ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು" ಎಂದು ಹೇಳಿದ್ದಾರೆ.