ಮುಂಬೈ,ಜ.17 (DaijiworldNews/HR): "ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ" ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕಚೇರಿ, "ಅಧಿಕ ಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಮತ್ತು ಸಂಸ್ಕೃತಿ ಹೊಂದಿರುವ ಪ್ರದೇಶಗಳನ್ನು ಮಹಾರಾಷ್ಟಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಗಡಿ ವಿಷಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ" ಎಂದು ತಿಳಿಸಿದೆ.
ಇನ್ನು "ನಾವು ಒಗ್ಗಟ್ಟಾಗಿದ್ದು, ಈ ವಿಷಯದಲ್ಲಿ ಬದ್ಧತೆಯನ್ನು ಪ್ರದರ್ಶಿಸುತ್ತೇವೆ. ಈ ಭರವಸೆಯೊಂದಿಗೆ ನಾವು ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ" ಎಂದು ಟ್ವೀಟ್ನಲ್ಲಿ ತಿಳಿಸಿದೆ.
ಬೆಳಗಾವಿ ಮತ್ತು ಇತರ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ 1956ರಲ್ಲಿ ನಡೆದ ಹೋರಾಟದಲ್ಲಿ ಮಡಿದವರ ಗೌರವಾರ್ಥ ಮಹಾರಾಷ್ಟ್ರ ಏಕೀಕರಣ ಸಮಿತಿಯು ಜನವರಿ 17ರಂದು ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದೆ.