ಉಡುಪಿ, ಜ 17 (DaijiworldNews/SM): ಜನವರಿ 18 ಮತ್ತು 19ರಂದು ಸಿಎಂ ಬಿಎಸ್ ವೈಯವರು ಎರಡು ದಿನಗಳ ಉಡುಪಿ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 18ರಂದು ಸಂಜೆ 3 ಗಂಟೆಗೆ ಸಿಎಂ ಬಿಎಸ್ ವೈ ಉಡುಪಿಗೆ ಆಗಮಿಸಲಿದ್ದಾರೆ.
ಅಂದು ಸಂಜೆ 5 ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸಿಎಂ ಭೇಟಿ ನೀಡಲಿದ್ದಾರೆ. ಹಾಗೂ ನೂತನ ದರ್ಶನದ ಹಾದಿ ವಿಶ್ವ ಪಥದ ಉದ್ಘಾಟನೆ ನಡೆಸಲಿದ್ದಾರೆ. ಪರ್ಯಾಯ ಸಂಪ್ರದಾಯದ 500 ವರ್ಷಗಳ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ಇನ್ನು ಜನವರಿ 19ರಂದು ಬೆಳಿಗ್ಗೆ ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನ ಭೇಟಿ ನೀಡಲಿದ್ದಾರೆ. ಬಳಿಕ ಹೆಜಮಾಡಿ ಕೋಡಿ ಮೀನುಗಾರಿಕಾ ಬಂದರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮದ್ಯಾಹ್ನ ಆನೆಗುಡ್ಡೆ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.