ಬೆಂಗಳೂರು, ಜ 17 (DaijiworldNews/SM): ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದ್ದು, ಯಶಸ್ವಿಯಾಗಿದೆ. ರಾಜ್ಯದಲ್ಲಿ ಇಲ್ಲಿಯ ತನಕ ಲಸಿಕೆ ಪಡೆದು ಅಡ್ಡಪರಿಣಾಮ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ವ್ಯಾಪ್ತಿಯಲ್ಲಿ ಮೊದಲನೆ ಹಂತದಲ್ಲಿ ಲಸಿಕೆ ನೀಡಲಾಗಿದೆ. ಶನಿವಾರ ಒಂದೇ ದಿನದಲ್ಲಿ 14 ಸಾವಿರ ಕೊರೋನಾ ವಾರಿಯರ್ಸ್ಗಳಿಗೆ ಲಸಿಕೆ ನೀಡಿದ್ದೇವೆ. ಇಲ್ಲಿಯ ತನಕ ಅಡ್ಡಪರಿಣಾಮವಾಗಿರುವ ಬಗ್ಗೆ ವರದಿಯಾಗಿಲ್ಲ. ಈ ಹಿನ್ನೆಲೆ ಎರಡನೇ ಹಂತದ ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿವುದಾಗಿ ಅವರು ತಿಳಿಸಿದ್ದಾರೆ.
ಇನ್ನು ಲಸಿಕೆ ನೀಡಿಕೆ ಒಂದೆಡೆಯಾದರೆ, ಮತ್ತೊಂದೆಡೆ ಕೊರೋನಾ ನಿಯಂತ್ರಣ ಕ್ರಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.