ಮಂಗಳೂರು, ಜ 17 (DaijiworldNews/SM): ದ.ಕ.ಜಿಲ್ಲೆಯ ಆರೋಗ್ಯ ಬುಲೆಟಿನ್ ಪ್ರಕಾರ ರವಿವಾರದಂದು 31 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 33,425ಕ್ಕೆ ಏರಿಕೆಯಾಗಿದೆ. ಪ್ರಸ್ತುತ 80 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ರವಿವಾರದಂದು 46 ಮಂದಿ ಗುಣಮುಖರಾಗಿದ್ದಾರೆ. ಇದರಿಂದಾಗಿ 32,612 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಇನ್ನು ಇಲ್ಲಿಯ ತನಕ ಜಿಲ್ಲೆಯಲ್ಲಿ 5,45,377 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 5,11,952 ಮಂದಿಯ ವರದಿ ನೆಗೆಟಿವ್ ಆಗಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 733 ಮಂದಿ ಮೃತಪಟ್ಟಿದ್ದಾರೆ.