ಶಿವಮೊಗ್ಗ,ಜ.18 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಕುಳಿತುಕೊಳ್ಳಲು ಆಗುತ್ತಿಲ್ಲ, ಅದಕ್ಕೆ ಅವರು ನಾನೇ ಮುಂದಿನ ಸಿಎಂ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಸ್ವಯಂಘೋಷಿತ ಮುಖ್ಯಮಂತ್ರಿ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಆ ಪಕ್ಷದವರಿಗೆ ಗೊತ್ತಿದೆ. ಅವರ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಾದರೂ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಲಿ ನೋಡೋಣ" ಎಂದರು.
ಇನ್ನು "ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂದು ಸಿದ್ದರಾಮಯ್ಯ ಕನಸಿನಲ್ಲಿ ಹೇಳುತ್ತಿರುತ್ತಾರೆ. ಇದೇ ಮೊದಲನೇ ಸಲವಲ್ಲ, ಇದುವರೆಗೆ 57 ಅಥವಾ 58 ಬಾರಿ ಹೇಳಿರಬಹುದು. ಇತ್ತೀಚೆಗಷ್ಟೇ ಗ್ರಾಮ ಪಂಚಾಯತ್ ಚುನಾವಣೆ ಬಳಿಕ ಸಿಎಂ ಬದಲಾಗುತ್ತಾರೆ ಎಂದಿದ್ದರು" ಎಂದು ಹೇಳಿದ್ದಾರೆ.