ಬೆಂಗಳೂರು, ಜ 18 (DaijiworldNews/SM): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಜ್ಯ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿರುವ ಗೃಹ ಸಚಿವ ಅಮಿತ್ ಶಾ ಅವರ ಬಿಜೆಪಿ ಸರಕಾರ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿದೆ ಎಂಬುವುದಾಗಿ ಸುಳ್ಳು ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಅಂಕಿ ಅಂಶಗಳ ಮೂಲಕ ಗೃಹ ಸಚಿವರ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಅಮಿತ್ ಶಾ ರಾಜ್ಯಕ್ಕೆ ಆಗಮಿಸುವ ಮುನ್ನ ಹೋಮ್ ವರ್ಕ್ ಮಾಡಿಕೊಂಡ ಬರಬೇಕೆಂದು ಲೇವಡಿ ಮಾಡಿದ್ದಾರೆ.
ವ್ಯಾಪಾರದಲ್ಲಿ ನುರಿತ ಗುಜರಾತಿಗಳು ಲೆಕ್ಕದಲ್ಲಿ ಪಕ್ಕಾ ಎನ್ನಲಾಗುತ್ತದೆ. ಆದರೆ ಗುಜರಾತ್ ರಾಜ್ಯದವರಾದ ಪ್ರಧಾನಿ ಮತ್ತು ಗೃಹಸಚಿವರು ಮಾತು ಮಾತಿಗೂ ಸುಳ್ಳು ಲೆಕ್ಕಾಚಾರ ನೀಡುತ್ತಾರೆ ಎಂದು ಲೇವಾಡಿ ಮಾಡಿದ್ದಾರೆ.