ಪಶ್ಚಿಮ ಬಂಗಾಳ, ಜ 18 (DaijiworldNews/SM): ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ಅವರಿಗೆ ಹೊಸದಾಗಿ ಬಿಜೆಪಿ ಸೇರ್ಪಡೆಗೊಂಡಿರುವ ಸುವೇಂದು ಅಧಿಕಾರಿ ತಿರುಗೇಟು ನೀಡಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತಾವು ನಂದಿಗ್ರಾಮದಿಂದಲೇ ಸ್ಪರ್ಧಿಸುತ್ತೇನೆ. ತಮ್ಮ ರಾಜಕೀಯದ ಮಾಜಿ ಮುಖ್ಯಸ್ಥೆಯ ಸವಾಲನ್ನು ನಾನು ಎದುರಿಸಲು ಸಿದ್ಧವಾಗಿದ್ದೇನೆ. ಕೋಲ್ಕತಾದಲ್ಲಿ ಸೋಮವಾರ ಸಮಾವೇಶದಲ್ಲಿ ಮಾತನಾಡಿದ ಸುವೇಂದು ಅಧಿಕಾರಿ, ಮಮತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲ್ಕತ್ತಾದಲ್ಲಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿ, ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆನ್ನುವುದನ್ನು ಬಿಜೆಪಿ ನಿರ್ಧರಿಸುತ್ತದೆ. ಒಂದು ವೇಳೆ ಪಕ್ಷ "ನಂದಿಗ್ರಾಮದಿಂದ ಸ್ಪರ್ಧಿಸಲು ಅವಕಾಶ ನೀಡಿದ್ದಲ್ಲಿ, ಮಮತಾ ಅವರನ್ನು 50 ಸಾವಿರ ಮತಗಳ ಅಂತರದಿಂದ ಸೋಲಿಸುವೆ ಎಂದಿದ್ದಾರೆ.
ಮಮತಾ ಬ್ಯಾನರ್ಜಿ ಅವರನ್ನು ಅರ್ಧ ಲಕ್ಷದಷ್ಟು ಮತಗಳಿಂದ ಸೋಲಿಸದೆ ಹೋದರೆ ರಾಜಕೀಯ ತ್ಯಜಿಸುತ್ತೇನೆ' ಎಂದು ವಾಗ್ದಾಳಿ ನಡೆಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಸುವೇಂದು ಅಧಿಕಾರಿ ಈ ಹೇಳಿಕೆ ನೀಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.