ಸೂರತ್, ಜ.19 (DaijiworldNews/HR): ಗುಜರಾತ್ನ ಕೋಸಂಬಾದಲ್ಲಿ ಟ್ರಕ್ ಹರಿದು 13 ಮಂದಿ ಸಾವನಪ್ಪಿದ ಘಟನೆ ನಡೆದಿದ್ದು, ಮೃತಪಟ್ಟವರನ್ನು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಮಿಕರೆಲ್ಲರೂ ರಾಜಸ್ಥಾನದ ಬಾಂಸ್ವಾಡಾ ಮೂಲದವರೆಂದು ವರದಿಯಾಗಿದ್ದು, ಸೋಮವಾರ ರಾತ್ರಿ ಕಾರ್ಮಿಕರು ಫೂಟ್ಪಾತ್ ಮೇಲೆ ನಿದ್ರೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಕಬ್ಬು ತುಂಬಿದ್ದ ಟ್ರಕ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಫೂಟ್ಪಾತ್ ಮೇಲೆ ಸಾಗಿದ್ದು, ಅಲ್ಲಿ ಮಲಗಿದ್ದವರ ಪೈಕಿ 13 ಮಂದಿ ಮೃತಪಟ್ಟಿದ್ದು, ಗಾಯಗೊಂಡಿರುವ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.