ಕೋಲ್ಕತ್ತ,ಜ.19 (DaijiworldNews/HR): ಅಸಮಾಧಾನಗೊಂಡಿದ್ದ ಟಿಎಂಸಿ ಸಂಸದ ಪ್ರಸೂನ್ ಬ್ಯಾನರ್ಜಿ ಪಕ್ಷ ತೊರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದು, ಪಕ್ಷದೊಳಗೆ ಯಾವುದೇ ಬಿನ್ನಾಭಿಪ್ರಾಯಗಳಿದ್ದರೂ ಕೂಡ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವಂತೆ ಮನವಿ ಮಾಡಿಕೊಂಡಿದ್ದ.
ಭಾರತದ ಫುಟ್ಬಾಲ್ ತಂಡದ ಮಾಜಿ ನಾಯಕರಾಗಿರುವ ಹೌರಾದ ಸಂಸದ ಪ್ರಸೂನ್ ಬ್ಯಾನರ್ಜಿ ತಮ್ಮ ಜಿಲ್ಲೆಯ ಕುಂದುಕೊರತೆಗಳ ಬಗ್ಗೆ ಪಕ್ಷ ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು, ಬಳಿಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಸಭೆ ನಡೆಸಿದ ಪ್ರಸೂನ್ "ನಾನು ಪಕ್ಷವನ್ನು ತೊರೆದು ಎಲ್ಲಿಗೂ ಹೋಗುತ್ತಿಲ್ಲ. ಯಾವುದೇ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರೂ ಕೂಡ ಎಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ವಿರುದ್ಧ ಹೋರಾಡಬೇಕು" ಎಂದು ಕರೆ ನೀಡಿದ್ದಾರೆ.
ಇನ್ನು ಸಭೆಯಲ್ಲಿ ಭಾಗವಹಿಸಿದ್ದ ಟಿಎಂಸಿ ವಕ್ತಾರ ಕುನಾಲ್ ಘೋಷ್ ಮಾತನಾಡಿ, " ಟಿಎಂಸಿ ಪಕ್ಷದಲ್ಲಿ ಪ್ರಸೂನ್ ಬ್ಯಾನರ್ಜಿ ಅವರು ಹಿರಿಯರು ಮತ್ತು ಈ ದೇಶದ ಹೆಮ್ಮೆ. ಅವರು ಈಗಾಗಲೇ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ" ಎಂದರು.