ಬೆಂಗಳೂರು, ಜ.19 (DaijiworldNews/MB) : ''ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜನವರಿ 20ರಂದು ಬೃಹತ್ ಹೋರಾಟ ನಡೆಸಲಾಗುವುದು'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ''ರೈತರ ಆಗ್ರಹದಲ್ಲಿ ನ್ಯಾಯವಿದೆ. ನಾವು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರ ಪರವಾಗಿದ್ದು, ಈ ಕಾಯ್ದೆ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತೇವೆ'' ಎಂದು ಹೇಳಿದರು.
''ಸುಪ್ರೀಂ ಕೋರ್ಟ್ ಈ ಕಾಯ್ದೆಗೆ ತಡೆ ನೀಡಿದೆ ವಿನಃ ರದ್ದು ಮಾಡಿಲ್ಲ. ಆ ನಿಟ್ಟಿನಲ್ಲಿ ನಾವು ಈ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿದ್ದೇವೆ'' ಎಂದರು.