ಕುಂದಾಪುರ,ಜ.19 (DaijiworldNews/HR): ಮಾರ್ಚ್ ಮೊದಲ ವಾರ ಹಣಕಾಸಿನ ಇತಿಮಿತಿಯಲ್ಲಿ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಗಣಹೋಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಂಬರುವ ಎರಡು ದಿನಗಳಲ್ಲಿ ಹೊಸ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದೆ" ಎಂದರು.
ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ರೇಣುಕಾಚಾರ್ಯ ಜೊತೆ ಮಾತನಾಡಿದ್ದು, ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ" ಎಂದು ಸಿಎಂ ಹೇಳಿದ್ದಾರೆ.