ಮಂಗಳೂರು, ಜ 19 (DaijiworldNews/SM): ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಜಾರಿಗೆ ಬಂದಿದ್ದು ಕೃಷ್ಣನೂರಿನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕಾಯ್ದೆಗೆ ಚಾಲನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್, ಜಾನುವಾರು ಸಂರಕ್ಷಣಾ ಕಾಯ್ದೆಯ ಪ್ರಕಾರ ಹಿಂದಿನ ಗೋರಕ್ಷಣೆಯ ಎಲ್ಲಾ ಕೇಸ್ ಕ್ಲೋಸ್ ಮಾಡುತ್ತೇವೆ.
ಈ ಕುರಿತು ನಾನು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಈ ಹಿಂದಿನ ಎಲ್ಲಾ ಕೇಸ್ ಗಳನ್ನು ಕ್ಲೋಸ್ ಮಾಡಲು ಸೂಚಿಸಿದ್ದೇನೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.