ಮಂಗಳೂರು, ಜ 19 (DaijiworldNews/SM): ನಗರದ ಪಡೀಲ್ ಫೈಸಲ್ ನಗರ ಎಂಬಲ್ಲಿ ಬೈಕ್ ಸವಾರನೊಬ್ಬ ಬಸ್ ಚಾಲಕನ ಮೇಲೆ ಪೆಟ್ರೋಲ್ ಎರಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು, ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಚಾಲಕ ಹಾಗೂ ಬೈಕ್ ಸವಾರನ ನಡುವೆ ಘರ್ಷಣೆ ನಡೆದಿದೆ. ವಾಹನಗಳಿಗೆ ಸೈಡ್ ಕೊಡುವ ವಿಚಾರವಾಗಿ ಘರ್ಷಣೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿಲ್ಲ ಎಂಬುವುದಾಗಿ ಕಮಿಷನರ್ ಸ್ಪಷ್ಟಪಡಿಸಿದ್ದಾರೆ.