ನವದೆಹಲಿ, ಜ.20 (DaijiworldNews/HR): 2021-2022ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಮಂಡನೆಯಾಗಲಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಜನವರಿ 30ರಂದು ಸರ್ವಪಕ್ಷ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು ಈ ಬಾರಿಯ ಬಜೆಟನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆಂದು ವರದಿಯಾಗಿದೆ.
ಈ ವರ್ಷ ದೇಶದ ಆರ್ಥಿಕತೆ ಕುಸಿತ ಕಂಡಿದ್ದು, ಈ ವೇಳೆ ಬಜೆಟ್ ಮಂಡನೆಯಾಗುತ್ತಿರುವುದು ಆರ್ಥಿಕತೆಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎನ್ನಲಾಗಿದೆ.