ಚಂದನ್ನಗರ, ಜ.21 (DaijiworldNews/HR): ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ 'ದೇಶದ್ರೋಹಿಗಳ ಮೇಲೆ ಗುಂಡು ಹಾರಿಸಿ' (ಗೋಲಿ ಮಾರೋ) ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಹೂಗ್ಲಿ ಜಿಲ್ಲೆಯ ಬಿಜೆಪಿ ಪಕ್ಷದ ಮೂವರು ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದ್ದಾರೆ.
ಹೂಗ್ಲಿ ಜಿಲ್ಲೆಯಲ್ಲಿ ಬುಧವಾರ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಗೋಲಿ ಮಾರೋ ಘೋಷಣೆ ಕೂಗಿದ ಮೂವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಗುರುವಾರ ರಾತ್ರಿ ಪ್ರಕರಣ ದಾಖಲಿಸಿದ್ದು ಬಳಿಕ ಇಂದು ಬಂಧಿಸಲಾಗಿದೆ.
ಇನ್ನು ಬಂಧಿತರನ್ನು ಗುರುವಾರ ನ್ಯಾಯಾಲಯದ ಎದುರು ಹಾಜರುಪಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಬಿಜೆಪಿ ಧ್ವಜ ಹಿಡಿದು ಈ ರೀತಿಯ ಘೋಷಣೆ ಕೂಗಿರುವ ವ್ಯಕ್ತಿಗಳನ್ನು ಪಕ್ಷ ಎಂದಿಗೂ ಬೆಂಬಲಿಸುವುದಿಲ್ಲ" ಎಂದು ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ.