ಕಲಬುರಗಿ, ಜ.21 (DaijiworldNews/HR): "ನೂತನ ಸಚಿವರಿಗೆ ಖಾತೆ ಹಂಚಿಕೆ ಮತ್ತು ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪವಿಲ್ಲ" ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿಗಳಿಗೆ ಆಡಳಿತ ಅನುಭವವಿದೆ, ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ" ಎಂದರು.
ಇನ್ನು "ಮುಖ್ಯಮಂತ್ರಿ ಯಡಿಯೂರಪ್ಪನವರ ಅನೇಕ ವರ್ಷಗಳ ರಾಜಕೀಯ ಹೋರಾಟ ಮತ್ತು ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ, ಹಾಗಾಗಿ ಸರ್ಕಾರದಲ್ಲಿ ಯಾರ ಹಸ್ತಕ್ಷೇಪದ ಅಗತ್ಯವೂ ಬೀಳುವುದಿಲ್ಲ" ಎಂದು ಹೇಳಿದ್ದಾರೆ.