ಮಂಗಳೂರು, ಜ 21(DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಗುರುವಾರ 39 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳು 33,518ಕ್ಕೆ ಏರಿಕೆಯಾಗಿವೆ. ಈ ಪೈಕಿ 269 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇನ್ನು ಜಿಲ್ಲೆಯಲ್ಲಿ ಒಟ್ಟು 5,04,438 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,70,920 ಮಂದಿಯ ವರದಿ ನೆಗೆಟಿವ್ ಆಗಿದೆ. ಗುರುವಾರ 12 ಜನರನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಜಿಲ್ಲೆಯಲ್ಲಿ ಈವರೆಗೆ ಒಟ್ಟು 737 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಗುರುವಾರದಂದು ಜಿಲ್ಲೆಯಲ್ಲಿ 7 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,241ಕ್ಕೆ ಏರಿಕೆಯಾಗಿದೆ. ಈ ಪೈಕಿ 27 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,26,023 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,02,782 ನಕಾರಾತ್ಮಕವಾಗಿವೆ.
ಗುರುವಾರ 10 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.