ಬೆಂಗಳೂರು, ಜ.22 (DaijiworldNews/HR): "ಶಿಮೊಗ್ಗದ ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟಗೊಂಡು ಐದು ಜನ ಮೃತಪಟ್ಟಿದ್ದು, ಅವರ ಕುಟುಂಬಗಳಿಗೆ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ" ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಕ್ರಮ ಗಣಿಗಾರಿಕೆಯಿಂದ ಘಟನೆ ಆಗಿದ್ದರೆ ಈ ಬಗ್ಗೆ ತನಿಖೆ ನಡೆಸಲಾಗುವುದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಾಥಮಿಕ ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದರು.
ಇನ್ನು "ಘಟನಾ ಸ್ಥಳದಲ್ಲಿ ಸಂಸದ ರಾಘವೇಂದ್ರ ಇದ್ದು, ನಾನೂ ನಾಳೆ ಅಲ್ಲಿಗೆ ಹೋಗುತ್ತೇನೆ" ಎಂದು ತಿಳಿಸಿದ್ದಾರೆ.