ಕೋಲ್ಕತ್ತ, ಜ.22 (DaijiworldNews/HR): ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಅರಣ್ಯ ಸಚಿವ ರಾಜಿವ್ ಬ್ಯಾನರ್ಜಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿ ತಿಳಿಸಿರುವ ಅವರು, "ಪಶ್ಚಿಮ ಬಂಗಾಳದ ಜನರ ಸೇವೆ ಮಾಡುವುದಕ್ಕೆ ಅವಕಾಶ ದೊರೆತಿದ್ದು ನನ್ನ ಭಾಗ್ಯ, ಈ ಅವಕಾಶಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ತಿಳಿಸಿದ್ದಾರೆ.
ಇನ್ನು ರಾಜೀನಾಮೆ ಪತ್ರ ರಾಜ್ಯಪಾಲರಿಗೆ ರವಾನಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣ ಇನ್ನು ಬಹಿರಂಗ ಪಡಿಸಿಲ್ಲ ಎಂದು ವರದಿಯಾಗಿದೆ.