ಮಂಗಳೂರು, ಜ.22 (DaijiworldNews/HR): ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಸಂತೋಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮುಂದಿನ ದಿನಗಳಲ್ಲಿ ಅನುಷ್ಟಾನಕ್ಕೆ ಬರಲಿದ್ದು ಅದಕ್ಕೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರಿಗೆ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.
ಇನ್ನು ಕೇಂದ್ರದ ಮೇಕ್ ಇನ್ ಇಂಡಿಯಾ ಯೋಜನೆಯ ಅಂಗವಾಗಿರುವ ಪ್ಲಾಸ್ಟಿಕ್ ಪಾರ್ಕ್ ಗಂಜಿಮಠ ಪರಿಸರದಲ್ಲಿ ಅನುಷ್ಟಾನಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸಹಿತ ಜಿಲ್ಲೆಯ ಬೆಳವಣಿಗೆಗೆ ಕಾರಣವಾಗಲಿದೆ.