ಬೆಂಗಳೂರು,ಜ.22 (DaijiworldNews/HR): ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ನವರು ಆಯೋಜಿಸಿದ್ದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಕರ್ತವ್ಯನಿರತ ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಐಪಿಎಸಿ ಸೆಕ್ಷನ್ 323, 353ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಮುಖಂಡರು ರಾಜಭವನದತ್ತ ಸಾಗಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ವಶಕ್ಕೆ ತೆಗೆದುಕೊಂಡಿದ್ದರು, ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಸೌಮ್ಯರನ್ನು ವಾಹನಕ್ಕೆ ಕರೆತರಲು ಮುಂದೆ ಬಂದಾಗ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದೂರು ನೀಡಿರುವ ಸೌಮ್ಯ ನಂತರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪೊಲೀಸರ ವಿರುದ್ಧ ದೂರು ನೀಡಿದ್ದರು.