ನವದೆಹಲಿ,ಜ.23 (DaijiworldNews/HR): ನೇತಾಜಿ ಸುಭಾಸ್ ಚಂದ್ರ ಬೋಸ್ ಹಾಗೂ ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರಿಗೆ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದ್ದಾರೆ.
ಸುಭಾಸ್ ಚಂದ್ರ ಬೋಸ್ ಅವರ 125ನೇ ಜಯಂತಿಯ ಹಿನ್ನಕೆಯಲ್ಲಿ ಪ್ರಥಮ 'ಪರಾಕ್ರಮ ದಿವಸ್' ಕಾರ್ಯಕ್ರಮ ಕೋಲ್ಕತ್ತದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಮಾತನಾಡಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, "ಮಹಾ ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತ ಮಾತೆಯ ನಿಜವಾದ ಪುತ್ರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಂದು ಗೌರವ ಸಲ್ಲಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.
ಇನ್ನು "ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರಿಗೆ ಗೌರವ ಸಲ್ಲಿಸಿದ ಮೋದಿ, "ಅವರು ತಮ್ಮ ಆದರ್ಶಗಳನ್ನು ಎತ್ತಿಹಿಡಿಯುವಲ್ಲಿ ಅಚಲರಾಗಿದ್ದರು" ಎಂದು ಹೇಳಿದ್ದಾರೆ.