ರಾಮನಗರ,ಜ.23 (DaijiworldNews/HR): "ಯಾವುದೇ ಪಕ್ಷದ ಕಾರ್ಯಕರ್ತರಿರಲಿ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದಲ್ಲಿ ಸರ್ಕಾರವು ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ಮಂಡ್ಯದಲ್ಲಿ ಈಗ ಅನೇಕ ಅಕ್ರಮ ಗಣಿಗಳಿವೆ ಎಂದು ಅಲ್ಲಿನ ಸಚಿವರು ಹೇಳಿದ್ದು, ಅವರು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಒಂದೂವರೆ ವರ್ಷ ಕಳೆದಿದೆ. ಅವರಿಗೆ ಮಾಹಿತಿ ಇರಲಿಲ್ಲವಾ? ಹಾಗಾದರೆ ಅವರು ಅಸಮರ್ಥರ?" ಎಂದು ಪ್ರಶ್ನಿಸಿದ್ದಾರೆ.
ಇನ್ನ್ನು "ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಟ್ಟಿರಲಿಲ್ಲ, ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಪಾಠ ಹೇಳುತ್ತಾರೆ. ಮೊದಲು ಅದು ಕರ್ನಾಟಕದಲ್ಲಿ ಜಾರಿ ಆಗಲಿ" ಎಂದು ಹೇಳಿದ್ದಾರೆ.