ಮೈಸೂರು, ಜ. 23 (DaijiworldNews/SM): ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನೇಕ ಕಾರ್ಯ ಚಟುವಟಿಕೆಗಳಿಗೆ ತೊಡಕುಂಟಾಗಿದೆ. ರಾಜ್ಯದ ಆದಾಯಕ್ಕೂ ಏಟು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಬಜೆಟ್ ಗಾತ್ರವನ್ನು ತಗ್ಗಿಸುವ ಅನಿವಾರ್ಯತೆ ಇದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾದಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ರಾಜ್ಯದಲ್ಲಿ ಆದಾಯ ಬಂದಿಲ್ಲ. ರಾಜ್ಯದಲ್ಲಿ ಸಂಪನ್ಮೂಲದ ಕೊರತೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯವೆಂದು ಸಿಎಂ ತಿಳಿಸಿದ್ದಾರೆ.
ಕಳೆದ ಬಾರಿ 2.37 ಲಕ್ಷ ಕೋಟಿ ಬಜೆಟ್ ಗಾತ್ರವಿತ್ತು. ಈ ಬಾರಿ ಅಷ್ಟು ಗಾತ್ರದ ಬಜೆಟ್ ಇರುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.